ಕ್ರೀಡೆ

ಪಾಂಡ್ಯ, ಕೆ.ಎಲ್.ರಾಹುಲ್ ಗೆ ಬಿಸಿಸಿಐನಿಂದ ಶೋಕಾಸ್ ನೋಟಿಸ್

ಸಿಡ್ನಿ,.9-ಮಹಿಳೆಯರ ಕುರಿತು ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನಿರೂಪಕ ಹಾಗೂ ನಿರ್ಮಾಪಕ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ಶೋದಲ್ಲಿ ಪಾಂಡ್ಯ ವಿವಾದಾತ್ಮಕ ಸ್ತ್ರೀದ್ವೇಷಿ ಹಾಗೂ ಕಾಮಪ್ರಚೋದಕ ಹೇಳಿಕೆ ನೀಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ಪಾಂಡ್ಯ ಕ್ಷಮೆಯಾಚಿಸಿದ್ದಾರೆ.

ಆದರೆ ನಾವು ಕೆ.ಎಲ್. ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯಾಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದೇವೆ. ಬಗ್ಗೆ ವಿವರಣೆ ನೀಡಲು ಅವರಿಗೆ 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಬಿಸಿಸಿಐನ ವಿನೋದ್ ರೈ ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: