ಮೈಸೂರು

ಫೆ.3ರಂದು ಕೃಷ್ಣರಾಜಪೇಟೆ ತಾಲ್ಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ

ಮೈಸೂರು,ಜ.9 : ಕೃಷ್ಣರಾಜಪೇಟೆ ತಾಲ್ಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆಯನ್ನು ಫೆ.3ರಂದು ಹಮ್ಮಿಕೊಳ್ಳಲಾಗಿದೆ.

ಸಂಘದ ಅಧ್ಯಕ್ಷರಾಗಿ ಡಿ.ಆರ್.ವೆಂಕಟೇಶ್, ಗೌರವಾಧ‍್ಯಕ್ಷರಾಗಿ ಹೆಚ್.ವಿ.ಗಣೇಶ್, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಬಿ.ರಾಮಚಂದ್ರ, ಖಜಾಂಚಿಯಾಗಿ ಹೆಚ್.ಎಸ್.ಬಲರಾಮ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಎಸ್.ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಸಂಘದ ವತಿಯಿಂದ ವತಿಯಿಂದ ಮೈಸೂರಿನಲ್ಲಿ ವಾಸವಿರುವ ಕೆ.ಆರ್.ಪೇಟೆ ತಾಲ್ಲೂಕಿನ ಪ್ರತಿಭಾನ್ವಿತ ಮಕ್ಕಳಿಗೆ ಉಚಿತ ವಿದ್ಯಾರ್ಥಿ ನಿಲಯ, ವಿದ್ಯಾರ್ಥಿವೇತನ , ಕೋಚಿಂಗ್ ತರಗತಿ ನಡೆಸುವುದು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸುವ ಉದ್ದೇಶದಿಂದ ಸಂಘವನ್ನು ತೆರೆಯಲಾಗಿದೆ.

ಅದರಂಗವಾಗಿ ಪ್ರತಿಭಾ ಪುರಸ್ಕಾರವನ್ನು ಏರ್ಪಸಿಡಿಸಿದ್ದು 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: