ಸುದ್ದಿ ಸಂಕ್ಷಿಪ್ತ

ಉದ್ಯಮ ಶೀಲತಾ ತರಬೇತಿಗೆ ಚಾಲನೆ

ಮೈಸೂರು,ಜ.9- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಸಾಲ ಯೋಜನೆಗಳಡಿಯಲ್ಲಿ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ನಂಜುಂಡೇಶ್ವರ ಭವನದಲ್ಲಿ 3 ದಿನಗಳ ಉದ್ಯಮ ಶೀಲತಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.

ತರಬೇತಿಯನ್ನು ಉದ್ಘಾಟಿಸಿದ ನಂಜನಗೂಡು ಶಾಸಕ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಆಯ್ಕೆ ಸಮಿತಿಯ ಅಧ್ಯಕ್ಷ ಹರ್ಷವರ್ಧನ ಮಾತನಾಡಿ, ಫಲಾನುಭವಿಗಳಿಗೆ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಿಳುವಳಿಕೆ ನೀಡಿದರು.

ಡಿ. ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಾಹಿತಿಯನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: