ದೇಶಪ್ರಮುಖ ಸುದ್ದಿ

ಮೇಲ್ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ನಿಗದಿ ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಅಪೀಲು ದಾಖಲು

ಹೊಸದಿಲ್ಲಿ (ಜ.10): ಮೇಲ್ವರ್ಗದ ಆರ್ಥಿಕವಾಗಿ ದುರ್ಬಲರಿಗೆ ಶೇ.10 ಮೀಸಲಾತಿ ಒದಗಿಸಲು ಸಂವಿಧಾನದಲ್ಲಿ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಗುರುವಾರ ಅಪೀಲು ಸಲ್ಲಿಸಲಾಗಿದೆ.

ಕೇವಲ ಎರಡೇ ದಿನಗಳ ಚರ್ಚೆಯ ನಂತರ ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ಈ ಮಸೂದೆ ಸಂವಿಧಾನದ ಎರಡು ಮುಖ್ಯ ಅಂಶಗಳನ್ನು ಉಲ್ಲಂಘಿಸಿದೆ ಎಂದು ಅಪೀಲಿನಲ್ಲಿ ತಿಳಿಸಲಾಗಿದೆ. ಸಂವಿಧಾನದ ಅನುಚ್ಛೇದ 15 ಹಾಗೂ 16ಕ್ಕೆ ಪ್ರಸ್ತಾಪಿಸಲಾಗಿರುವ ಸೇರ್ಪಡೆಗಳು ಹಲವಾರು ರೀತಿಯಲ್ಲಿ ಸಂವಿಧಾನವನ್ನು ಉಲ್ಲಂಘಿಸುತ್ತವೆ ಹಾಗೂ ಮೀಸಲಾತಿ ಶೇ.50ರಷ್ಟಿರಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿದೆ ಎಂದು ಅಪೀಲು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: