ಮೈಸೂರು

ಮಲ್ಪೆಯಲ್ಲಿ ನಾಪತ್ತೆಯಾಗಿರುವ ಏಳು ಜನ ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜ.11:- ಮಲ್ಪೆಯಲ್ಲಿ ನಾಪತ್ತೆಯಾಗಿರುವ ಏಳು ಜನ ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಸತೀಶ್, ಹರೀಶ್, ರಮೇಶ್, ಸಾಮೋದರ್, ಚಂದ್ರಶೇಖರ್, ರವಿ, ಲಕ್ಷ್ಮಣ್ ಎಂಬರು ನೋಟ್ ನೋಂದಣಿ ಸಂಖ್ಯೆ IND-KA-02MM4632 ಸಂಖ್ಯೆಯ ಸುವರ್ಣ ತ್ರಿಭುಜ ಎಂಬ ಹೆಸರಿನ ಬೋಟಿನಲ್ಲಿ ಮೀನುಗಾರಿಕೆಗೆ ಹೋಗಿದ್ದರು. ಇಂದಿಗೆ ಅವರು ನಾಪತ್ತೆಯಾಗಿ 26ದಿನವಾದರೂ ಯಾವುದೇ ಸುಳಿವಿಲ್ಲ. ಇದು ಕರ್ನಾಟಕ ರಾಜ್ಯಾದ್ಯಂತ ಇರುವ ಎಲ್ಲ ಮೀನುಗಾರಿಕೆ ಮಾಡುವವರಿಗೆ ಚಿಂತೆ ಗೀಡುಮಾಡಿದೆ. ಅವರನ್ನು ಹುಡುಕಿಕೊಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಪ್ರೊ.ಹೆಚ್.ಎಂ.ವಸಂತಮ್ಮ, ಚಿಕ್ಕಲಿಂಗಸ್ವಾಮಿ, ನಾರಾಯಣ ಲೋಲಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: