ಮೈಸೂರು

ಮಹಿಳೆ ಸೇರಿ 9 ಮಂದಿ ದರೋಡೆಕೋರರ ಬಂಧನ : ಸಿಸಿಬಿ ಕಾರ್ಯಾಚರಣೆ

ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡಗಟ್ಡಿ ಸುಲಿಗೆ ಮಾಡುತ್ತಿದ್ದ ದರೋಡೆಕೋರರನ್ನು ಬಂಧಿಸುವಲ್ಲಿ ಮೈಸೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸಿ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಹಿಳೆ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರೂವರೆ ಲಕ್ಷ ರೂ. ನಗದು ಸೇರಿದಂತೆ ಸುಮಾರು 30 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಸಿಸಿಬಿ ಎಸಿಪಿ ಗೋಪಾಲ್ ಮತ್ತವರ ತಂಡ ಕಾರ್ಯಾಚರಣೆ ನಡೆಸಿತ್ತು.

Leave a Reply

comments

Related Articles

error: