ಮೈಸೂರು

ಪಡಿತರ ವ್ಯವಸ್ಥೆ ಮುಂದುವರಿಸಲು ಒತ್ತಾಯಿಸಿ ಎಸ್.ಯು.ಸಿ.ಐ ಪ್ರತಿಭಟನೆ

ಪಡಿತರ ವ್ಯವಸ್ಥೆ ಮುಂದುವರಿಸಲು ಆಗ್ರಹಿಸಿ ಸೋಸಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ವತಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಮೆರವಣಿಗೆಯು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾಗಿ ಗಾಂಧಿ ವೃತ್ತ, ಸಯ್ಯಾಜಿರಾವ್ ರಸ್ತೆ, ಚಿಕ್ಕಗಡಿಯಾರ, ಅರಸು ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾತನಾಡಿ, ಸರ್ಕಾರ ಈ ತಿಂಗಳಿನಿಂದ ಪ್ರಾಯೋಗಿಕವಾಗಿ ಪಡಿತರ ವಿತರಣಾ ವ್ಯವಸ್ಥೆಯ ಬದಲು ನಗದು ವರ್ಗಾವಣೆ ಪದ್ಧತಿಯನ್ನು ಜಾರಿಗೆ ತಂದರೆ ಜನರಿಗೆ ತೊಂದರೆಯಾಗಲಿದೆ. ಅದರಿಂದ ನಗದು ವರ್ಗಾವಣೆ ಪದ್ಧತಿ ಬೇಡ. ಜನತೆಯ ಹಿತದೃಷ್ಟಿಯಿಂದ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ಮೇಟಿ, ಶಶಿಧರ್, ಉಮಾದೇವಿ, ರವಿ, ಸಂಧ್ಯಾ,ಸೀಮಾ ಸೇರಿದಂತೆ 150ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: