ಮೈಸೂರು

ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಲು ಒತ್ತಾಯ : ಮೆರವಣಿಗೆ

2016 ನೇ ಸಾಲಿನ ಸೆಪ್ಟೆಂಬರ್’ನಿಂದ ಡಿಸೆಂಬರ್ ತಿಂಗಳವರೆಗೆ ಅತಿಥಿ ಉಪನ್ಯಾಸಕರಿಗೆ ನೀಡಬೇಕಾಗಿರುವ 3 ತಿಂಗಳ ಗೌರವಧನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಸಮಿತಿಯ ಅಧ್ಯಕ್ಷ ಡಾ.ಕೆ.ಪ್ರದೀಪ್ ಕುಮಾರ್ ಒತ್ತಾಯಿಸಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಧನ ಬಿಡುಗಡೆ, ಹೆಚ್ಚಳ, ನೇರ ನೇಮಕಾತಿಯಲ್ಲಿ ಆದ್ಯತೆ ಮತ್ತು ಸೇವಾಭದ್ರತೆಗಾಗಿ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಬೆಂಗಳೂರು ಮತ್ತು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಂಘ, ಮೈಸೂರು ಇವರ ವತಿಯಿಂದ ಜ.18 ರ ಬುಧವಾರ ಬೆಳಿಗ್ಗೆ. 11.30 ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವೃತ್ತದಿಂದ ಜಂಟಿ ನಿರ್ದೇಶಕರು ಪ್ರಾದೇಶಿಕ ಕಾಲೇಜು ಶಿಕ್ಷಣ ಇಲಾಖೆ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ನಾಗಾರ್ಜುನ್ ಮತ್ತು ಹನುಮಂತೇಶ್ ಹಾಜರಿದ್ದರು.

Leave a Reply

comments

Related Articles

error: