
ಪ್ರಮುಖ ಸುದ್ದಿ
ಗಾಂಧಿ ಮೈದಾನದಲ್ಲಿ ಮಾಹಿತಿ ಮಳಿಗೆ ಉದ್ಘಾಟನೆ ನೆರವೇರಿಸಿದ ಸಚಿವ ಸಾ.ರಾ.ಮಹೇಶ್
ರಾಜ್ಯ(ಮಡಿಕೇರಿ) ಜ.12:- ಕೊಡಗು ಪ್ರವಾಸಿ ಉತ್ಸವ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಮೂರು ದಿನಗಳ ಕಾಲ ಸಿರುವ ಏರ್ಪಡಿಸಿರುವ ಸರ್ಕಾರದ ಹಲವು ಕಾರ್ಯಕ್ರಮಗಳನ್ನು ಒಳಗೊಂಡ ಮಾಹಿತಿ ಮಳಿಗೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ಉದ್ಘಾಟಿಸಿದರು.
ಸರ್ಕಾರದ ಹಲವು ಜನಪರ ಯೋಜನೆಗಳಾದ ಸಾಲಮನ್ನಾ, ಬಡವರ ಬಂಧು, ಕೃಷಿ ಕ್ಷೇತ್ರದ ಅಭಿವೃದ್ಧಿ ಹೀಗೆ ನಾನಾ ಯೋಜನೆಗಳ ಮಾಹಿತಿ ಒಳಗೊಂಡ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ವೀಕ್ಷಿಸಿದರು.
ಹಾಗೆಯೇ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಏರ್ಪಡಿಸಿರುವ ಛಾಯಾಚಿತ್ರ ಪ್ರದರ್ಶನ ಮಳಿಗೆ, ಕೊಡಗು ಪ್ರಗತಿ ಪರ ಜೇನು ಕೃಷಿ ಸಹಕಾರ ಸಂಘ, ಸ್ವಚ್ಛ ಭಾರತ ಅಭಿಯಾನ, ಕೃಷಿ, ತೋಟಗಾರಿಕೆ ಇಲಾಖೆಗಳಿಂದ ನಿರ್ಮಿಸಿರುವ ಪ್ರದರ್ಶನ ಮಳಿಗೆ, ಐನ್ಮನೆ, ಹೋಟೆಲ್ ಕಾವೇರಿ, ಹೋಟೆಲ್ ಗ್ರೀನ್ ಲ್ಯಾಂಡ್, ಹೋಂ ಸ್ಟೇ ಅಸೋಷಿಯೇಷನ್, ಕೊಡಗು ಕಾಫಿ ಬೆಳೆಗಾರರ ಸಂಘ, ಸ್ತ್ರೀಶಕ್ತಿ ಗುಂಪುಗಳು, ಸಾಂಬಾರ ಮಂಡಳಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹೀಗೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆಯನ್ನು ವೀಕ್ಷಣೆ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಮು, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಪ್ರಾಚ್ಯವಸ್ತು ಇಲಾಖೆಯ ಆಯುಕ್ತರಾದ ವೆಂಕಟೇಶ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ, ಹಿರಿಯ ಸಹಾಯಕ ನಿರ್ದೇಶಕರಾದ ದೇವಕಿ, ಸಹಾಯಕ ನಿರ್ದೇಶಕರಾದ ಪ್ರಮೋದ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜನಾರ್ಧನ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)