ಕರ್ನಾಟಕಮೈಸೂರು

ರಾಜ್ಯದಲ್ಲೇ ಕಡಿಮೆ ತಾಪಮಾನ ದಾಖಲಿಸಿದ ಮೈಸೂರು!

ಬೆಂಗಳೂರು (ಜ.12): ಬೆಂಗಳೂರಲ್ಲಿ ನಿಧಾನವಾಗಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಶೀತಮಾರುತ ಬೀಸುವುದು ಕಡಿಮೆಯಾಗಿರುವುದರಿಂದ ಕನಿಷ್ಠ ತಾಪಮಾನ ಶುಕ್ರವಾರ 15.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11.12 ಡಿಗ್ರಿ ಸೆಲ್ಸಿಯಸ್ ಇದ್ದ ಕನಿಷ್ಠ ತಾಪಮಾನ 14.7 ಡಿಗ್ರಿ ತಲುಪಿದೆ. ಇನ್ನು ಎಚ್‌ಎಎಲ್‌ನಲ್ಲಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ಇದೆ.

ಗರಿಷ್ಠ ತಾಪಮಾನ ಬೆಂಗಳೂರು ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ಡಿಗ್ರಿ ಸೆಲ್ಸಿಯಸ್ ಹಾಗೂ ಎಚ್‌ಎಎಲ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮೈಸೂರಿನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಅಂದರೆ 10.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನೂ ಐದಾರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಎನ್.ಬಿ)

Leave a Reply

comments

Related Articles

error: