ಮೈಸೂರು

ಶುಲ್ಕ ಹೆಚ್ಚಳಕ್ಕೆ ವಿರೋಧ : ಪ್ರತಿಭಟನೆ

ದ್ವಿಚಕ್ರವಾಹನ ಮತ್ತು ಆಟೋ ಕನ್ಸಲ್ಟೆಂಟ್ ಮಾಲೀಕರು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ವಿವಿಧ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಗುರುವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರಿನ ಮಿಷನ್ ಆಸ್ಪತ್ರೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಲಿಕಾ ಪರವಾನಗಿ, ಚಾಲನಾ ಪರವಾನಗಿ, ವಾಹನ ನೋಂದಣಿ ಸೇರಿದಂತೆ ವಿವಿಧ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದು, ಪರಿಷ್ಕೃತ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬನ್ನೂರು ಕೆ.ರಾಜು, ಕುಮಾರ್, ನಾಗೇಶ್, ಜೆಡಿಎಸ್ ನಗರಾಧ್ಯಕ್ಷ ಹರೀಶ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: