ಸುದ್ದಿ ಸಂಕ್ಷಿಪ್ತ

ಜ.14ರಂದು ಪತ್ರಕರ್ತರ ಅಭ್ಯುದಯ ಸಹಕಾರ ಸಂಘದಿಂದ ಸಾಲ ವಿತರಣೆ ದಿನದರ್ಶಿಕೆ ಬಿಡುಗಡೆ

ಮೈಸೂರು,ಜ.12 : ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ವತಿಯಿಂದ ‘ಸಾಲ ವಿತರಣೆ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭ’ ವನ್ನು ಜ.14ರ ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿ ಸಾಲ ವಿತರಿಸಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ದಿನದರ್ಶಿಕೆ ಬಿಡುಗಡೆಗೊಳಿಸುವರು. ಸಂಘದ ಅಧ್ಯಕ್ಷ ಕೆ.ದೀಪಕ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: