ಸುದ್ದಿ ಸಂಕ್ಷಿಪ್ತ

ನಾಳೆ 200ನೇ ಭೀಮಾ ಕೊರೆಗಾಂವ್ ವಿಜಯೋತ್ಸವ

ಮೈಸೂರು,ಜ.12 : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ 200ನೇ ಭೀಮಾ ಕೊರೆಗಾಂವ್ ವಿಜಯೋತ್ಸವವನ್ನು ನಾಳೆ ಬೆಳಗ್ಗೆ 11.30ಕ್ಕೆ ದಿ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ಏರ್ಪಡಿಸಲಾಗಿದೆ.

ಸಂಸದ ಧೃವನಾರಾಯಣ್ ಉದ್ಘಾಟಿಸಲಿದ್ದಾರೆ. ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೋದಂಡರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ, ಮೈಸೂರು-ಚಾಮರಾಜನಗರ ಸಹಕಾರ ಸಂಘದ ಅಧ್ಯಕ್ಷ ಜಿ.ಟಿ.ಹರೀಶ್ ಗೌಡ, ಸೇನೆಯ ಉಪಾಧ್ಯಕ್ಷ ಆನಂದ್ ಕುಮಾರ್ ಕ್ಯಾಲೆಂಡರ್ ಬಿಡುಗಡೆಗೊಳಿಸುವರು.

ಜಿ.ಪಂ. ಮಾಜಿ ಅಧ್ಯಕ್ಷ ನಯಿಮಾ ಸುಲ್ತಾನ್, ಜೆಡಿಎಸ್ ಮುಖಂಡ ಸೋಮಸುಂದರ್, ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ, ದಲಿತ ಮುಖಂಡ ಸಿ.ಎಸ್.ಜಗದೀಶ್, ನಿಂಗರಾಜು ಮಲ್ಲಾಡಿ ಮತ್ತಿತರ ಗಣ್ಯರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: