
ಮೈಸೂರು
ಸಂಕ್ರಾಂತಿ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತರ ದಂಡು
ಮೈಸೂರು,ಜ.16:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು.
ಸಂಕ್ರಾಂತಿ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆಭಕ್ತರ ದಂಡೇ ಹರಿದು ಬಂದಿದ್ದು, ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಭಕ್ತರು ಸರತಿಯ ಸಾಲಿನಲ್ಲಿ ನಿಂತು ಪಡೆದರು. ಸಂಕ್ರಾಂತಿ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಮಕರ ಸಂಕ್ರಾಂತಿಯ ಪ್ರಯುಕ್ತ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. (ಕೆ.ಎಸ್,ಎಸ್.ಎಚ್)