ಮೈಸೂರು

ಬಿಎಸ್ಪಿ ನಾಯಕಿಯಾಗಿರುವ ಮಾಯಾವತಿ ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ : ಶಾಸಕ ಎನ್.ಮಹೇಶ್

ಮೈಸೂರು,ಜ.16:- ಬಿಎಸ್ಪಿ ನಾಯಕಿ ಮಾಯಾವತಿ ಅವರ 63ನೇ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆ ಹಮ್ಮಿಕೊಂಡಿದ್ದ ಜನಕಲ್ಯಾಣ ಕಾರ್ಯಕ್ರಮವನ್ನು ಮಾಜಿ ಸಚಿವ, ಶಾಸಕ ಎನ್.ಮಹೇಶ್ ಉದ್ಘಾಟಿಸಿದರು.

ನಗರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಬಿಎಸ್ಪಿ ನಾಯಕಿಯಾಗಿರುವ ಮಾಯಾವತಿಯವರು ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ. ಅದರಿಂದ ಅಖಿಲೇಶ್ ಯಾದವ್ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಹೊಂದಾಣಿಕೆ ಉತ್ತರಪ್ರದೇಶದ ಸುತ್ತಮುತ್ತಲಿನ 9 ರಾಜ್ಯಗಳ ಮೇಲೆ ಪ್ರಭಾವ ಬೀರಲಿದೆ. ಜನಸಾಮಾನ್ಯರ ಅಭಿವೃದ್ಧಿಯೇ ಮಾಯಾವತಿಯವರ ಮೂಲಮಂತ್ರವಾಗಿದ್ದು, ರಾಜ್ಯದಿಂದ ಲೋಕಸಭಾ ಸದಸ್ಯರನ್ನು ಆರಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಈ ಸಂದರ್ಭ ರಾಜ್ಯಸಭೆ ಸದಸ್ಯ ಡಾ.ಅಶೋಕ್ ಕುಮಾರ್, ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಪ್ರಭುಸ್ವಾಮಿ, ನಗರ ಘಟಕದ ಅಧ್ಯಕ್ಷ ಬಸವರಾಜು, ಪಾಲಿಕೆಯ ಸದಸ್ಯೆ ಬೇಗಂ ಪಲ್ಲವಿ, ಮುಖಂಡರಾದ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: