ಮೈಸೂರು

ಪಂಜಿನ ಮೆರವಣಿಗೆ

ಸ್ವಾಮಿ ವಿವೇಕಾನಂದರ 155ನೇ ಜನ್ಮದಿನೋತ್ಸವದ ಅಂಗವಾಗಿ ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಯುವಮೋರ್ಚ ವತಿಯಿಂದ ಗುರುವಾರ ಸಂಜೆ ಸ್ವಾಮಿ ವಿವೇಕಾನಂದರ 155 ನೇ ಜನ್ಮದಿನೋತ್ಸವದ ಅಂಗವಾಗಿ ಪಂಜಿನ ಮೆರವಣಿಗೆಯನ್ನು ಮಾಜಿ ಸಚಿವ ಎಸ್.ಎ. ರಾಮದಾಸ್ ನೇತೃತ್ವದಲ್ಲಿ ನಡೆಸಲಾಯಿತು.

ಪಂಜಿನ ಮೆರವಣಿಗೆಯನ್ನು ಸ್ವಾಮಿ ವಿವೇಕಾನಂದರು ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ತಂಗಿದ್ದ ಸ್ಥಳವಾದ ಈಗಿನ ಎನ್.ಟಿ.ಎಮ್ ಶಾಲೆಯ  ಮುಂಭಾಗದಿಂದ ಪ್ರಾರಂಭಿಸಿ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಶಿವರಾಮ್ ಪೇಟೆಯ ಹಾಗೂ ದೇವರಾಜ ಅರಸು ರಸ್ತೆಯ ಮೂಲಕ ಸಾಗಿ ಎನ್.ಟಿ.ಎಮ್ ಶಾಲೆಯ ಆವರಣದಲ್ಲಿ ಮುಕ್ತಾಯಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರುಗಳಿಗೂ ಹಾಗೂ ಪದಾಧಿಕಾಗಳು ಉಪಸ್ಥಿತರಿದ್ದರು.

Leave a Reply

comments

Related Articles

error: