ಮೈಸೂರು

ಬಿಜೆಪಿ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದೆ : ಕಾಂಗ್ರೆಸ್ ಪ್ರತಿಭಟನೆ

ಮೈಸೂರು,ಜ.17:- ಬಿಜೆಪಿ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದೆ ಎಂದು ಆರೋಪಿಸಿ ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಗಾಂಧಿವೃತ್ತದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.  ಬಿಜೆಪಿ ಮುಖಂಡರು ರಾಜ್ಯದಲ್ಲಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು  ಬಿಜೆಪಿ ನಾಯಕರು ಮತ್ತು ಶಾಸಕರುಗಳಿಗೆ  ಧಿಕ್ಕಾರ ಕೂಗಿದರು. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಕುತಂತ್ರಿ ಯಡಿಯೂರಪ್ಪ, ಅಮಿತ್ ಷಾ ಗೆ ಧಿಕ್ಕಾರ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ನಾಯಕರು ಆಪರೇಷನ್ ಕಮಲದ ಹೆಸರಿನಲ್ಲಿ ಪದೇ ಪದೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದು ರಾಜ್ಯದ ಜನತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆಯೇ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ. ಇನ್ನು ಮುಂದೆಯೂ ಸರ್ಕಾರ ನಡೆಸಲು ಬಿಡದೇ ಇದೇ ರೀತಿ ಪ್ರಜಾಪ್ರಭುತ್ವದ ಕಗ್ಗೊಲೆಯಲ್ಲಿ ತೊಡಗಿದರೆ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಇದೇ ವೇಳೆ ಯುದ್ಧ ವಿಮಾನ ರಾಫೆಲ್ ಖರೀದಿಯಲ್ಲೂ ಭಾರತೀಯರ ಹಣ ಲೂಟಿಯಾಗಿದೆ ಎಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಮೂರ್ತಿ, ಮೇಯರ್ ಪುಷ್ಪಲತಾ ಜಗನ್ನಾಥ್, ಮಂಗಳಗೌರಿ, ದೇವರಾಜು, ಶಿವಮೂರ್ತಿ, ರೇವಣ್ಣ, ಚಂದ್ರು, ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಎಸ್ ಸಿ ಎಸ್ ಟಿ ಘಟಕದ ಸದಸ್ಯರು, ವಿದ್ಯಾರ್ಥಿ ಘಟಕದ ಸದಸ್ಯರು, ಯುವ ಕಾಂಗ್ರೆಸ್ ಸದಸ್ಯರು, ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: