ಸುದ್ದಿ ಸಂಕ್ಷಿಪ್ತ

ಜಾಗೃತಿ ಸಮಾವೇಶ ನಾಳೆ

ಮೈಸೂರು,ಜ.17 : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಅಂಗವಾಗಿ ಶಿಕ್ಷಣ ವಂಚಿತ ಬಡ ಕುಟುಂಬಗಳ ‘ಜಾಗೃತಿ ಸಮಾವೇಶ’ ವನ್ನು ನಾಳೆ ಬೆಳಗ್ಗೆ 10.30ಕ್ಕೆ ಇನ್ಸ್ ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪುಟ್ಟಲಕ್ಷ್ಮಮ್ಮ ಅಧ್ಯಕ್ಷತೆ ವಹಿಸುವರು. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್ ಮಲ್ಲಾಡಿ, ಸಂಗೀತ ವಿವಿಯ ಉಪಕುಲಪತಿ ನಾಗೇಶ್ ವಿ ಬೆಟ್ಟಕೋಟೆ, ಜಿ.ಪಂ.ಸದಸ್ಯ ದಿನೇಶ್ ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜನಗರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಮತ್ತಿತರರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: