Uncategorized

ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ ಭದ್ರತೆ ಕೊಡಿ: ಸುಪ್ರೀಂ

ನವದೆಹಲಿ,ಜ.18-ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಾದ ಬಿಂದು ಹಾಗೂ ಕನಕದುರ್ಗಾ ಅವರಿಗೆ ಭದ್ರತೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ವಿರೋಧದ ನಡುವೆಯೂ ಬಿಂದು, ಕನಕಾದುರ್ಗಾ ಶಬರಿಮಲೆ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಬಳಿಕ ತಮಗೆ ಜೀವ ಬೆದರಿಕೆಯಿದೆ. ನಮಗೆ ರಕ್ಷಣೆ ನೀಡಿ ಎಂದು ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅದಕ್ಕೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಮಹಿಳೆಯರಿಗೆ 24 ಗಂಟೆಯೂ ಭದ್ರತೆ ನೀಡುವಂತೆ ಆದೇಶ ನೀಡಿದೆ.

ಶಬರಿಮಲೆ ದೇವಾಲಯ ಪ್ರವೇಶಿಸಿದ 50 ವರ್ಷದೊಳಗಿನ ಮೊದಲ ಮಹಿಳೆಯಾಗಿರುವ ಕನಕದುರ್ಗಾ ಇತ್ತೀಚೆಗೆ ತನ್ನ ಮನೆಗೆ ವಾಪಸಾದ ಸಂದರ್ಭದಲ್ಲಿ ಆಕೆಯ ಅತ್ತೆ ಅವರ ಮೇಲೆ ಹಲ್ಲೆ ನಡೆಸಿದ್ದು, ಅವರೀಗ ಮಲ್ಲಪ್ಪುರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನಕದುರ್ಗಾ ಹಾಗೂ ಬಿಂದು ಅಯ್ಯಪ್ಪ ದೇಗುಲ ಪ್ರವೇಶಿಸಿದ ಬಳಿಕ ಕೇರಳದಲ್ಲಿ ಭಾರೀ ಹಿಂಸಾಚಾರ ನಡೆದಿದ್ದು ಘಟನೆಗೆ ಸಂಬಂಧಿಸಿ ಕನಿಷ್ಠ 3,000 ಜನರನ್ನು ಬಂಧಿಸಲಾಗಿದೆ. ಜ.2ರ ತಡರಾತ್ರಿ ಕನಕದುರ್ಗಾ ಮತ್ತು ಬಿಂದು ಪೊಲೀಸ್​ ಬಿಗಿ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ್ದರು. (ಎಂ.ಎನ್)

 

Leave a Reply

comments

Related Articles

error: