ಕ್ರೀಡೆ

ಮಲೇಷ್ಯಾ ಮಾಸ್ಟರ್ಸ್ ಟೂರ್ನಿ: ಸೆಮಿಫೈನಲ್ ಗೆ ಲಗ್ಗೆಯಿಟ್ಟ ಸೈನಾ ನೆಹ್ವಾಲ್

ಕೌಲಾಲಂಪುರ,ಜ.19-ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ತಾರಾ ಶಟ್ಲರ್ ಸೈನಾ ನೆಹ್ವಾಲ್ ಸೆಮಿಫೈನಲ್ ಪ್ರವೇಶಿಸಿದರೆ, ಕಿದಂಬಿ ಶ್ರೀಕಾಂತ್ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಮಹಿಳಾ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಸೈನಾ, ಮಾಜಿ ವಿಶ್ವ ಚಾಂಪಿಯನ್‌ ಜಪಾನಿನ ನೊಜೊಮಿ ಒಕುಹಾರ ವಿರುದ್ಧ 21-18, 23-21 ನೇರ ಗೇಮ್‌ಗಳಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿದರು. ಸೈನಾ, ಸೆಮಿಫೈನಲ್‌ನಲ್ಲಿ 3 ಬಾರಿ ವಿಶ್ವ ಚಾಂಪಿಯನ್‌ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ ವಿರುದ್ಧ ಸೆಣಸಲಿದ್ದಾರೆ.

ಸೈನಾ 2017ರ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. 2011ರಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಪುರುಷರ ಸಿಂಗಲ್ಸ್‌ನ ಕ್ವಾರ್ಟರ್‌ನಲ್ಲಿ ಶ್ರೀಕಾಂತ್‌, ಕೊರಿಯಾದ ಸೊನ್‌ ವಾನ್‌ ಹೋ ವಿರುದ್ಧ 23-21, 16-21, 17-21 ಗೇಮ್‌ಗಳಲ್ಲಿ ಪರಾಭವಗೊಂಡರು. (ಎಂ.ಎನ್)

Leave a Reply

comments

Related Articles

error: