ಮೈಸೂರು

ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆ

ಮೈಸೂರು,ಜ.22:- ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಮಹಾಜನ ಸ್ವಯಂ ಸೇವಕ ಘಟಕಗಳ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ  ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಸರ್ವಜಯನಂದಜೀ ಮಹಾರಾಜ್ ಅವರು ಸ್ವಾಮಿ ವಿವೇಕಾನಂದರನ್ನು ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ವೆಂಕಟರಾಮು, ಶೈಕ್ಷಣಿಕ ಸಲಹೆಗಾರರಾದ ಡಾ. ಎಸ್. ಆರ್. ರಮೇಶ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಹೆಚ್. ಅಧ್ಯಾಪಕರಾದ ಧರ್ಮೇಶ ಎ.ಜಿ, ರುದ್ರೇಶ್, ನಂದೀಶ್ ಮತ್ತು ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. (ಎಸ್.ಎಚ್)

Leave a Reply

comments

Related Articles

error: