ಪ್ರಮುಖ ಸುದ್ದಿ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ : ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಅಸಮಾಧಾನ

ರಾಜ್ಯ(ಬೆಂಗಳೂರು)ಜ.22:- ನಡೆದಾಡುವ ದೇವರು ಲಿಂಗೈಕ್ಯ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಬೆಂಗಳೂರಿನತ್ತ ಗಣ್ಯರ ದಂಡೇ ಹರಿದು ಬರುತ್ತಿದೆ.

ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಆಗಮಿಸಿದ್ದಾರೆ. ತುಮಕೂರಿನತ್ತ ತೆರಳಲಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಸರಕಾರ ಘೋಷಿಸಿದೆ. ಈ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ನಡೆಸಬಾರದು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: