ಮೈಸೂರು

ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆ : ಶ್ರದ್ಧಾಂಜಲಿ ಸಮರ್ಪಣೆ

ಮೈಸೂರು,ಜ.22:- ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಮೈಸೂರಿನ ರಾಮಕೃಷ್ಣನಗರ ನಿವಾಸಿಗಳು ಶ್ರದ್ಧಾಂಜಲಿ ಸಮರ್ಪಿಸಿದರು.

ರಾಮಕೃಷ್ಣ ನಗರದ ಬಸವ ಸೇವಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಂದೋಲನ ವೃತ್ತದ ರಾಮಕೃಷ್ಣ ಪರಮಹಂಸರ ಪ್ರತಿಮೆ ಮುಂಭಾಗ ಸಿದ್ದಗಂಗಾ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.  ಶ್ರದ್ದಾಂಜಲಿ ಸಭೆಯಲ್ಲಿ ಪರಿಷತ್ ಮಾಜಿ ಸಚಿವ ಮಾದೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: