ಮೈಸೂರು

ಮೈಸೂರು ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ : ಸಂಸದ ಪ್ರತಾಪ್ ಸಿಂಹ

ಮೈಸೂರು,ಜ.24:- ಮೈಸೂರು ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಅವರಿಂದು ನೈರುತ್ಯ ರೈಲ್ವೆ ಮೈಸೂರು ನಿಲ್ದಾಣದ ಪುನರಾಭಿವೃದ್ಧಿಯ ಕಾಮಗಾರಿಯ ಶುಭಾರಂಭ ಮತ್ತು ಅಶೋಕಪುರಂ ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೆತುವೆ ವಿಸ್ತರಣೆಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೋಟ್ಯಾಂತರ ರೂ.ವೆಚ್ಚದಲ್ಲಿ ವಿವಿಧ ಕಾಮಗಾರಿ ನಡೆಯುತ್ತಿದೆ. ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರಿಗೆ ರೈಲು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋಗುತ್ತಿರುವ ನಿಟ್ಟಿನಲ್ಲಿ ಇಲ್ಲಿರುವ ವ್ಯವಸ್ಥೆ ಏನೇನೂ ಸಾಲದು. ನಾಗನಹಳ್ಳಿಯಲ್ಲಿ ಸೆಟಲೈಟ್ ನಿಲ್ದಾಣ ಮಾಡುತ್ತಿದ್ದೇವೆ. ಅಲ್ಲಿ ರೈಲು ಬಂದು ನಿಂತು ಮತ್ತೆ ಮೈಸೂರಿಗೆ ಬರಲಿದೆ ಎಂದರು. ಮೈಸೂರಿಗೆ ಹೆಚ್ಚು ಪ್ರಯಾಣಿಕರು ಬರುವ ನಿಟ್ಟಿನಲ್ಲಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶ್ರಾಂತಿ ಕೊಠಡಿ ಅಭಿವೃದ್ಧಿ, ಕಾರ್ ಪಾರ್ಕಿಂಗ್, ಆಟೋ ನಿಲ್ದಾಣ ಅಭಿವೃದ್ಧಿ ಮಾಡಲಾಗುವುದು. ಅಶೋಕಪುರಂ ರೈಲು ನಿಲ್ದಾಣದಲ್ಲಿ ರೈಲುಗಳು ಹಾಲ್ಟ್ ಆಗಲಿವೆ. ದಕ್ಷಿಣ ಬಡಾವಣೆಯ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ ಮೈಸೂರು ಜನತೆಗೆ ರೈಲು ಯಾನದಲ್ಲಿ ಹೆಚ್ಚಿನ ಸೌಲಭ್ಯ ದೊರಕಿದೆ ಎಂದು ತಿಳಿಸಿದರು.

ಇದೇ ವೇಳೆ ಪಾದಚಾರಿ ಮೇಲ್ಸೆತುವೆ ಕಾಮಗಾರಿಗೆ ಅಡಿಗಲ್ಲನ್ನಿಡಲಾಯಿತು. ಈ ಸಂದರ್ಭ ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮೈಸೂರು ದಕ್ಷಿಣ ವಲಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗರ್ಗ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: