ಕ್ರೀಡೆ

ಇಂಡೋನೇಷ್ಯಾ ಮಾಸ್ಟರ್ಸ್ ಟೂರ್ನಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧೂ, ಶ್ರೀಕಾಂತ್

ಜಕಾರ್ತ,ಜ.25-ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಮೆಂಟ್ ನಲ್ಲಿ ಭಾರತದ ಸ್ಟಾರ್ ಪ್ಲೇಯರ್ ಗಳಾದ ಪಿ.ವಿ.ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧೂ ಸ್ಥಳೀಯ ಆಟಗಾರ್ತಿ ಗ್ರೆಗೊರಿಯಾ ತುಜಾಂಗ್ ವಿರುದ್ಧ 23-21, 21-7ರ ಅಂತರದಲ್ಲಿ ಗೆಲುವು ದಾಖಲಿಸಿ ಅಂತಿಮ ಎಂಟರ ಘಟ್ಟಕ್ಕೆ ಮುನ್ನಡೆದರು.

ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಜಪಾನ್‌ನ ಕೆಂಟಾ ನಿಶಿಮೊಟೊ ವಿರುದ್ಧ 21-14, 21-9ರ ಅಂತರದ ವಿಜಯ ಗಳಿಸಿದ ಕಿಡಂಬಿ ಕ್ವಾರ್ಟರ್ ಫೈನಲ್‌ಗೆ ಮುನ್ನಡೆದರು.

ವರ್ಷಾರಂಭದಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸಿಂಧೂ, ಕಿಡಂಬಿ ಅವರಿಂದ ಅತ್ಯುತ್ತಮ ಪ್ರದರ್ಶನ ನಿರೀಕ್ಷಿಸಲಾಗುತ್ತಿದೆ. (ಎಂ.ಎನ್)

Leave a Reply

comments

Related Articles

error: