ಮೈಸೂರು

ಬೈಕ್ ಅಪಘಾತದಲ್ಲಿ ಯುವಕ ಸಾವು

ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಿ ವಾಪಾಸಾಗುತ್ತಿದ್ದ ವೇಳೆ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚನ್ನೇಗೌಡನದೊಡ್ಡಿ ಬಳಿ ನಡೆದಿದೆ

ಮೃತ ಯುವಕನನ್ನುಮದ್ದೂರು ತಾಲೂಕಿನ ಬೂದಕುಪ್ಪೆ ನಿವಾಸಿ ಪ್ರದೀಪ್ (20) ಎಂದು ಗುರುತಿಸಲಾಗಿದೆ. ಪ್ರದೀಪ್ ಜೊತೆ ಬೈಕ್ ನಲ್ಲಿ ಹಿಂಬದಿ ಕುಳಿತ ರಮೇಶ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರದೀಪ್ ಬೆಂಗಳೂರಿನ ಬಾರ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ವಿಷಸೇವಿಸಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ತನ್ನ ಸ್ನೇಹಿತನ ಆರೋಗ್ಯ ವಿಚಾರಿಸಿ ಬೈಕ್‍ನಲ್ಲಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: