ಮೈಸೂರು

ಶ್ರೀಪರಮಹಂಸ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ 70ನೇ ಗಣರಾಜ್ಯೋತ್ಸವ ಆಚರಣೆ

ಮೈಸೂರು,ಜ.26:- ಮೈಸೂರಿನ ಹೆಬ್ಬಾಳಿನ  ಎರಡನೇ ಹಂತದಲ್ಲಿರುವ ಶ್ರೀಪರಮಹಂಸ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ 70ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಮಹಾನಗರಪಾಲಿಕೆಯ ವಾರ್ಡ್ ನಂಬರ್ 2ರ ಸದಸ್ಯೆ ಪ್ರೇಮಾ ಶಂಕರೇಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವವನ್ನು  ಯಾಕೆ ಆಚರಿಸುತ್ತೇವೆ, ಅದರ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಇದೇ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ಯಲಾಯಿತು. ಶಾಲಾ ವಿದ್ಯಾರ್ಥಿಗಳು ಛದ್ಮವೇಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ದೇಶಭಕ್ತಿಯ ಗೀತೆಗಳನ್ನು ಹಾಡಿ ದೇಶಪ್ರೇಮ ಮೂಡಿಸಿದರು.

ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯಿನಿ  ನೀತಿ ಕುಮಾರಿ, ಶಾಲೆಯ  ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು, ಕಾರ್ಯದರ್ಶಿ ಸುಮಾ ವಿ, ಟ್ರಸ್ಟಿ ರಾಜಶೇಖರ್, ಖಜಾಂಚಿ ತೇಜಾವತಿ ಟಿ.ಎನ್, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: