ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 2 ದಿನ ಸಾಧಾರಣ ಮಳೆ ಸಾಧ್ಯತೆ!

ಬೆಂಗಳೂರು (ಜ.28): ವಾತಾವರಣದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಮುಂದಿನ ಎರಡು ದಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ತುಂತುರು ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಇನ್ನು ಎರಡು ದಿನ ಮೋಡ ಕವಿದ ವಾತಾವರಣ ಮುಂದುವರೆಯುವುದರಿಂದ ಚಳಿ ಪ್ರಮಾಣದಲ್ಲಿಯೂ ಇಳಿಕೆಯಾಗಲಿದೆ. ಕನಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ. ಜನವರಿ ಕೊನೆಯ ವಾರದಲ್ಲಿರುವುದರಿಂದ ಚಳಿ ಪ್ರಮಾಣ ಮುಂದಿನ ದಿನಗಳಲ್ಲಿ ಕಡಿಮೆ ಆಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ. (ಎನ್.ಬಿ)

Leave a Reply

comments

Related Articles

error: