ದೇಶಪ್ರಮುಖ ಸುದ್ದಿಮೈಸೂರು

ಪೆಟ್ರೋಲ್ ಡೀಸೆಲ್ ಅಲ್ಪ ಪ್ರಮಾಣದಲ್ಲಿ ಏರಿಕೆ

ವರ್ಷದ ಮೊದಲ ದಿನವೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ, ಮತ್ತೊಮ್ಮೆ ಅಲ್ಪ ಪ್ರಮಾಣದ ಏರಿಕೆ ಕಂಡಿದ್ದು, ಜನಸಾಮಾನ್ಯರಿಗೆ ಮತ್ತೊಮ್ಮೆ ಶಾಕ್ ನೀಡಿದೆ.  ಪೆಟ್ರೋಲ್ ದರ ಪ್ರತಿ ಲೀಟರ್ ಗೆ 0.42 ಪೈಸೆ ಏರಿಕೆ ಕಂಡಿದ್ದರೆ, ಡೀಸೆಲ್ ಪ್ರತಿ ಲೀಟರ್ ಗೆ 1.03 ರೂ.ನಂತೆ ಏರಿಕೆಯಾಗಿದೆ.
ನೂತನ ದರ ಭಾನುವಾರ(ಜನವರಿ 15) ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತಿಳಿಸಿವೆ. ವರ್ಷದ ಮೊದಲ ದಿನ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 1.29  ರೂ. ಏರಿಕೆ ಕಂಡಿದ್ದರೆ, ಡೀಸೆಲ್ ಪ್ರತಿ ಲೀಟರ್ ಗೆ 0.97 ರೂ. ನಂತೆ ಏರಿಕೆಯಾಗಿತ್ತು.
ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.
ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

Leave a Reply

comments

Related Articles

error: