ಮೈಸೂರು

ಬಾಸುದೇವ ಸೋಮಾನಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಮೈಸೂರು,ಜ.28:- ಬಾಸುದೇವ ಸೋಮಾನಿ ಕಾಲೇಜು, ಮೈಸೂರು ಇಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಇತ್ತೀಚೆಗೆ ರಾಷ್ಟ್ರೀಯ ಮತದಾರರ ದಿನವನ್ನು ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಮಹದೇವಯ್ಯ ಇವರು ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರರು ಮತ್ತು ವಿದ್ಯಾರ್ಥಿಗಳು (ಯುಜಿ ಮತ್ತು ಪಿಜಿ) ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. (ಎಸ್.ಎಚ್)

Leave a Reply

comments

Related Articles

error: