ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ ಕಾಂಗ್ರೆಸ್‍ನಿಂದ ಗಣರಾಜ್ಯೋತ್ಸವ ಆಚರಣೆ

ರಾಜ್ಯ(ಮಡಿಕೇರಿ) ಜ.29 : – ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 70ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಎಂ.ಎ. ಉಸ್ಮಾನ್, ಓಂಕಾರೇಶ್ವರ ದೇವಾಲಯ ಸಮಿತಿ ಆಧ್ಯಕ್ಷ ಪುಲಿಯಂಡ ಜಗದೀಶ್, ನಗರಸಭಾ ಸದಸ್ಯರಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ಹಿಂದುಳಿದ ಘಟಕದ ಅಧ್ಯಕ್ಷ ಜಿ.ಸಿ.ಜಗದೀಶ್, ಉಪಾದ್ಯಕ್ಷೆ ಶಶಿ, ಸ್ವರ್ಣಲತಾ, ಪ್ರಭು ರೈ, ಮುನೀರ್ ಮಾಚರ್, ಮಹಮ್ಮದ್ ಹಯಾತ್, ರವಿ ಗೌಡ, ಪ್ರೇಮ ಕೃಷ್ಣಪ್ಪ, ಮಮ್ತಾಜ್ ಬೇಗಂ, ರಾಣಿ, ಹನೀಫ್ ಹಾಗೂ ಕಾರ್ಯಕರ್ತರು ಹಾಜರಿದ್ದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಸ್ವಾಗತಿಸಿ, ವಂದಿಸಿದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: