
ಪ್ರಮುಖ ಸುದ್ದಿಮೈಸೂರು
ಫೆ.2ರಂದು ಗಿರೀಶ್ ಕಾರ್ನಾಡರ ನಾಟಕ ಕುರಿತು ರಾಜ್ಯಮಟ್ಟದ ಕಾರ್ಯಾಗಾರ
ಮೈಸೂರು. ಜ.29 : ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40 ವರ್ಷದ ಸಂಭ್ರಮಾಚರಣೆ ಅಂಗವಾಗಿ ಗಿರೀಶ್ ಕಾರ್ನಾಡರ ನಾಟಕಗಳಲ್ಲಿ ಪುರಾಣ, ಚರಿತ್ರೆ ಹಾಗೂ ರಾಜಕೀಯ ವಿಷಯವಾಗಿ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜು ಪ್ರಾಚಾರ್ಯರಾದ ಡಾ.ಎಸ್ ಮರೀಗೌಡ ತಿಳಿಸಿದರು.
ಕಾರ್ಯಾಗಾರವನ್ನು ಫೆ.2ರಂದು ಬೆಳಗ್ಗೆ 9.30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ನಿರ್ದೇಶಕ ವೈ.ಕೆ.ಮುದ್ದುಕೃಷ್ಣ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿ ಗೌರವಾಧ್ಯಕ್ಷ ಗುಂಡಪ್ಪ ಗೌಡ ಆಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವ ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮೀನಾರಾಯಣ, ಕಾಲೇಜು ನಿರ್ವಹಣಾ ಮಂಡಳಿ ಅಧ್ಯಕ್ಷ ಟಿ.ನಾಗರಾಜ ಉಪಸ್ಥಿತರಿರುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉದ್ಘಾಟನೆ ನಂತರ ನಡೆಯುವ ಗೋಷ್ಠಿಯಲ್ಲಿ ರಂಗಕರ್ಮಿ ಪ್ರೊ.ಹೆಚ್.ಎಸ್.ಉಮೇಶ್ ಅವರು “ಗಿರೀಶ್ ಕಾರ್ನಾಡರ ನಾಟಕಗಳು ಬಗ್ಗೆ. ಲೇಖಕ ಪ್ರೊ.ಸಿ.ನಾಗಣ್ಣ ಅವರು ದ ಸ್ಟ್ರಾಕ್ಚರ್ ಆಫ್ ಕಾನಸ್ಫರಿಸಿ ಇನ್ ತುಘಲಕ್ ಹಾಗೂ ಪ್ರೊ.ಪ್ರತಿಭಾ ಮುದಲಿಯಾರ್ ಅವರುಗಳು ಹಿಂದಿ ವಿಷಯ ಉಪನ್ಯಾಸ ಮಂಡಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ 3.25 ರಿಂದ ಸಂಶೋಧನಾ ಪ್ರಬಂಧ ಮಂಡನೆಯಾಗಲಿದೆ, ಕಾಲೇಜಿನ ಕನ್ನಡ, ಇಂಗ್ಲಿಷ್, ಹಿಂದಿ ವಿಭಾಗಗಳು ಹಾಗೂ ಐಕ್ಯೂಎಸಿ ವತಿಯಿಂದ ಈ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್, ಡಾ.ಸಿ.ಆರ್.ಸಿಂಧು, ಡಾ.ಧನಂಜಯ ಬಾಲಳ್ಳಿ, ಕಾಂಚನ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)