ಸುದ್ದಿ ಸಂಕ್ಷಿಪ್ತ

ಕ್ಯಾತನಹಳ್ಳಿ ಪ್ರಕಾಶ್ ಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ

ಮೈಸೂರು,ಜ.30-ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಮುದ್ದೇಬಿಹಾಳ ತಾಲೂಕು ಯುವಕ ಸಂಘಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ನ ಮೈಸೂರು ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್ ಅವರನ್ನು ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜ.31 ರಂದು ಸಂಜೆ 5 ಗಂಟೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸರ್ಕಾರಿ ಕಾಲೇಜು ಮೈದಾನದಲ್ಲಿ ಸ್ವಾಮಿ ವಿವೇಕಾನಂದ ಜಯಂತೋತ್ಸವ ಹಾಗೂ ರಾಜ್ಯ ಯುವ ಸಮ್ಮೇಳನದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕ್ಯಾತನಹಳ್ಳಿ ಪ್ರಕಾಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. (ಎಂ.ಎನ್)

Leave a Reply

comments

Related Articles

error: