
ಪ್ರಮುಖ ಸುದ್ದಿ
ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು
ರಾಜ್ಯ(ಬೆಂಗಳೂರು)ಜ.31:- ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆ ಬೆಟ್ಟಹಲಸೂರು ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಸೊಣ್ಣೆನಹಳ್ಳಿ ನಿವಾಸಿ ಚನ್ನಪ್ಪ (56) ಎಂದು ಹೇಳಲಾಗಿದ್ದು, ಸ್ಥಳಕ್ಕೆ ಚಿಕ್ಕಜಾಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಯಲಹಂಕ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)