ಸುದ್ದಿ ಸಂಕ್ಷಿಪ್ತ

ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ

ಹಾಸನ (ಜ.31): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.1 ರಂದು ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಮಡಿವಾಳ ಮಾಚಿದೇವ ಜಯಂತಿಯನ್ನು ಏರ್ಪಡಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್.ಡಿ ರೇವಣ್ಣ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕರಾದ ಪ್ರೀತಮ್.ಜೆ.ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎಸ್. ಶ್ವೇತಾದೇವರಾಜ್, ಶಾಸಕರಾದ ಎ.ಟಿ.ರಾಮಸ್ವಾಮಿ, ಹೆಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ಎಂ.ಎ.ಗೋಪಾಲಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ.ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್.ಪ್ರಕಾಶ್‍ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಸಿ. ಪುಟ್ಟಸ್ವಾಮಿ, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ., ಕನ್ನಡ ಮತ್ತು ಸಂಸ್ಕøತಿ ಇಲಾಖೆ ಶಿವಲಿಂಗಪ್ಪ ಎನ್.ಕುಂಬಾರ ಮತ್ತಿತರರು ಭಾಗವಹಿಸಲಿದ್ದಾರೆ. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಯೋಗೇಶ್ ಎನ್. ಉಪನ್ಯಾಸ ನೀಡಲಿದ್ದಾರೆ. (ಎನ್.ಬಿ)

Leave a Reply

comments

Related Articles

error: