ಪ್ರಮುಖ ಸುದ್ದಿಮೈಸೂರು

ಫೆ.3ರಂದು ಅಬಾಕಸ್ ಸ್ಪರ್ಧೆಯ ಬಹುಮಾನ ವಿತರಣೆ

ಮೈಸೂರು,ಫೆ.1 : ನಗರದ ಐ ಕ್ಯೂ ಪ್ಲಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ ಬಹುಮಾನ ವಿತರಣಾ ಹಾಗೂ ಪದವಿ ಪ್ರದಾನ ಕಾರ್ಯಕ್ರಮವನ್ನು ಫೆ.3ರಂದು ಏರ್ಪಡಿಸಲಾಗಿದೆ ಎಂದು ಅಕಾಡೆಮಿ ನಿರ್ದೇಶಕ ಶ್ರೀಕಾಂತ್ ಭಟ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಿವೇದಿತ ನಗರದ ಅಕ್ಮಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಾಂಶುಪಾಲೆ ಸವಿತಾ ಇರುವರು, ಇವರೊಂದಿಗೆ ಡಾ.ನಾರಾಯಣ ಹೆಗ್ಡೆ, ವಾಸುದೇವ ರಾವ್ ಆರೂರ್, ಸುಭಾಷಿಣಿ, ಆ.ಮ.ಭಾಸ್ಕರ್ ಇವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಳೆದ ತಿಂಗಳು ದಿ.20ರಂದು ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯನ್ನು ನಡೆಸಲಾಗಿತ್ತು. ಇದರಲ್ಲಿ ಸುಮಾರು 993 ವಿದ್ಯಾರ್ಥಿಗಳು ಭಾಗಿಯಾಗಿದ್ದರು, ಅವರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಹಾಗೂ ಐ ಕ್ಯೂ ಪ್ಲಸ್ ಅಕಾಡೆಮಿಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ತರಬೇತಿಗಾರ್ತಿ ಪುಪ್ಪ ಹಾಗೂ ಸುಪ್ರಿಯಾ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: