ಸುದ್ದಿ ಸಂಕ್ಷಿಪ್ತ

ಫೆ. 3ರಂದು ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಮೈಸೂರು,ಫೆ.1 : ಜೆಎಸ್ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸಂಸ್ಥೆಯ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಫೆ.3ರಂದು ಮಧ್ಯಾಹ್ನ 3 ಗಂಟೆಗೆ ಸುತ್ತೂರಿನ ಅಲ್ಲಮಪ್ರಭು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಇರಲಿದ್ದಾರೆ. ಜೆಎಸ್ಎಸ್ ಪ್ರ.ನಿ.ಹಿ.ವಿ ಸಂಘದ ಉಪಾಧ್ಯಕ್ಷ ಡಾ.ಎಂ.ನಂಜುಂಡಪ್ಪ ಅಧ್ಯಕ್ಷತೆ ವಹಿಸುವರು. ಧಾರವಾಡ ಕೃಷಿ ವಿವಿಯ ವಿಶ್ರಾಂತ ಕುಲಪತಿ ಡಾ.ಎಂ.ಮಹದೇವಪ್ಪ, ಬೆಂಗಳೂರು ವಿವಿಯ ವಿಶ್ರಾಂತ ಕುಲಪತಿಯಾದ ಡಾ.ಕೆ.ಸಿದ್ದಪ್ಪ ಇವರುಗಳು ಮುಖ್ಯ ಅತಿಥಿಗಳಾಗಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: