ಮೈಸೂರು

‘ಪಾರಂಪರಿಕ ಕಟ್ಟಡಗಳು ಮತ್ತು ಐತಿಹಾಸಿಕ ಶಾಸನಗಳು’ ವಿಷಯ ಕುರಿತ ಜಾಗೃತಿ

ಮೈಸೂರು,ಫೆ.2:- ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಕೆಂಪೇಗೌಡನಹುಂಡಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಏರ್ಪಡಿಸಿದ್ದ ‘ಪಾರಂಪರಿಕ ಕಟ್ಟಡಗಳು ಮತ್ತು ಐತಿಹಾಸಿಕ ಶಾಸನಗಳು’ ವಿಷಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ರಾಮದಾಸ ರೆಡ್ಡಿಯವರು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಹೆಚ್, ಅಧ್ಯಾಪಕರಾದ ನಂದೀಶ್ ಹಾಗೂ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳಾದ ಧರ್ಮೇಶ ಎ.ಜಿ. ಮತ್ತು ರುದ್ರೇಶ್ ಮತ್ತು ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: