ಮೈಸೂರು

ಪ್ರಧಾನಿ ನರೆಂದ್ರ ಮೋದಿಯವರು ಚುನಾವಣಾ ಗಿಮಿಕ ಬಜೆಟ್ ನೀಡಿದ್ದಾರೆಂದು ಆರೋಪಿಸಿ ಪ್ರತಿಭಟನೆ

ಮೈಸೂರು,ಫೆ.2:- ಪ್ರಧಾನಿ ನರೆಂದ್ರ ಮೋದಿಯವರು ಚುನಾವಣಾ ಗಿಮಿಕ ಬಜೆಟ್ ನೀಡಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ನ್ಯಾಯಾಲಯದ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಲೋಕಪಾಲ್ ಬಿಲ್ ಮತ್ತು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ. ಆರ್ಥಿಕ ದುರ್ಬಲ ಕುಟುಂಬದ ಮೇಲ್ಜಾತಿಯವರಿಗೆ ಶೇ.10ರಷ್ಟು ಮೀಸಲಾತಿ ನೀಡಿರುವುದು ಸಂವಿಧಾನದ ಆರ್ಟಿಕಲ್ 340ಕ್ಕೆ ವಿರುದ್ಧವಾಗಿದ್ದು, ಜಾರಿಗೊಳಿಸಿದರೆ ವರ್ಗ ಸಂಘರ್ಷ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ 10ಅಂಶಗಳ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಪುಟ್ಟಸಿದ್ದಶೆಟ್ಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: