ಮೈಸೂರು

ಅಭಿಷೇಕ್ ಆತ್ಮಹತ್ಯೆಗೆ ಕಾರಣಾದವರನ್ನು ಬಂಧಿಸಿ : ಬಿಜೆಪಿ ಯುವಮೋರ್ಚಾ ಒತ್ತಾಯ

ಶೃಂಗೇರಿ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಕರ್ತರಾದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕಾಂಗ್ರೆಸ್ ಆಡಳಿತ ಹಲವು ಭಾಗ್ಯಗಳ ಜೊತೆ ನಾಡಿನ ಜನತೆಗೆ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ ಎಂದು ಆರೋಪಿಸಿದರು. ಅಭಿಷೇಕ್ ಆತ್ಮಹತ್ಯೆಗೆ ಕಾಣದ ಕೈಗಳ ಕೈವಾಡವಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ 50ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: