ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿಯವರೇ ನನ್ನ ಸರಕಾರ ಉಳಿಸುತ್ತಾರೆ ಅಂದ್ರು ಸಿಎಂ ಎಚ್.ಡಿ.ಕೆ!

ಬೆಂಗಳೂರು (ಫೆ.4): ಯಡಿಯೂರಪ್ಪನವರು ನನ್ನ ಸರಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿಯಲ್ಲೇ ಕೆಲವರು ನನ್ನ ಸರಕಾರ ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ನಡೆದ ಸಂವಾದದಲ್ಲಿ ಕುಮಾರಸ್ವಾಮಿ ಈ ಮಾತನ್ನು ಹೇಳಿದ್ದಾರೆ. ಮುಂದಿನ ವಾರ ನಡೆಯಲಿರುವ ಬಜೆಟ್ ಅಧಿವೇಶನದ ವೇಳೆ ಬಿಜೆಪಿ ಸರಕಾರ ಬೀಳಿಸಲು ಯತ್ನಿಸುತ್ತಿದೆ ಎಂಬ ಸುಳಿವು ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಇದೇ ವೇಳೆ ಬಿಜೆಪಿ ಮಲ್ಲೇಶ್ವರಂ ಶಾಸಕ ಅಶ್ವಥ್‌ನಾರಾಯಣ್ ರವಿವಾರದ ಬೆಳಗ್ಗೆಯಿಂದಲೇ ಬೆಂಗಳೂರಿನಿಂದ ಮುಂಬೈಗೆ ತೆರಳಿದ್ದು, ಅಲ್ಲಿ ಅತೃಪ್ತ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಸಹಿತ ನಾಲ್ವರು ಕಾಂಗ್ರೆಸ್ ಶಾಸಕರು ಯಾರ ಸಂಪರ್ಕಕ್ಕೂ ಸಿಗದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. (ಎನ್.ಬಿ)

Leave a Reply

comments

Related Articles

error: