ಮೈಸೂರು

ಅಪಘಾತ ತಪ್ಪಿಸಲು ಹೋಗಿ ನೆಲಕ್ಕುರುಳಿದ ಬೈಕ್ ಸವಾರ: ಗಂಭೀರ ಗಾಯ

ಬೈಕ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ಮುಂದಿನ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರನೋರ್ವ ಸ್ವತಃ ತಾನೇ ಬಿದ್ದು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ನಡೆದಿದೆ.

ನಂಜನಗೂಡು ಕಡೆಯಿಂದ ಯುವತಿಯೋರ್ವರನ್ನು ಬೈಕಿನಲ್ಲಿ ಕೂರಿಸಿಕೊಂಡು ವೇಗವಾಗಿ ತೆರಳುತ್ತಿದ್ದ ವೇಳೆ,    ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಗಾಬರಿಯಿಂದ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸವಾರ  ಕೆಳಕ್ಕೆ ಬಿದ್ದು, ತಲೆಗೆ  ಪೆಟ್ಟಾಗಿದೆ. ಬಿದ್ದ ರಭಸಕ್ಕೆ ತೀವ್ರ ಪೆಟ್ಟಾಗಿದ್ದು, ಅಧಿಕ ರಕ್ತಸ್ರಾವವಾಗಿದೆ. ಗಾಯಗೊಂಡ ಸವಾರನನ್ನು ಸಾರ್ವಜನಿಕರು ನೀರು ಕುಡಿಸಿ, ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮರೆದಿದ್ದಾರೆ. ಹಿಂಬದಿ ಕುಳಿತ ಯುವತಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾಳೆ.  ಅಪಘಾತದ  ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.

Leave a Reply

comments

Related Articles

error: