ಮೈಸೂರು

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮೈಸೂರು,ಫೆ.7:- ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕುವೆಂಪುನಗರದಲ್ಲಿ ನಡೆದಿದೆ.

ಮೃತರನ್ನು ದೀಪಕ್ (47) ಎಂದು ಹೇಳಲಾಗಿದ್ದು, ಅವರ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಹೊರಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆಯದೇ ಇರುವುದನ್ನು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.  ಇವರು ನಗರದ ಧನ್ವಂತ್ರಿ ರಸ್ತೆಯಲ್ಲಿ ಮೊಬೈಲ್ ರಿಪೇರಿ ಮಾಡುತ್ತಿದ್ದರು.  ಇವರು ಹೃದಯಾಘಾತದಿಂದ ಸಾವನ್ನಪ್ಪಿರಬೇಕೆಂದು ಪೊಲೀಸರು ತಿಳಿಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕೊಂಡೊಯ್ಯಲಾಗಿದೆ.

ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: