ಕರ್ನಾಟಕ

ಫೆ.8 ರಂದು ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆ

ಮಂಡ್ಯ (ಫೆ.8): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಫೆ.8 ರಂದು ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆಯನ್ನು ನಡೆಸಲಾಗುತ್ತದೆ ಎಂದು ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಂಚೇಗೌಡ ಅವರು ತಿಳಿಸಿದ್ದಾರೆ.

1 ರಿಂದ 19 ವಯಸ್ಸಿನ ಎಲ್ಲಾ ಅಂಗನವಾಡಿ ಕೇಂದ್ರ, ಸರ್ಕಾರಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ-ಕಾಲೇಜು ಹಾಗೂ ಪದವಿ, ತಾಂತ್ರಿಕ ಕಾಲೇಜಿನ ಮಕ್ಕಳಿಗೆ ಒಂದೇ ದಿನದಂದು ಜಂತುಹುಳು ನಿರ್ವಹಣೆ ಮಾಡುವ ಆಲ್ಬೆಂಡಾಜೋಲ್ ಮಾತ್ರೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತದೆ.

2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3,80,598 ಮಕ್ಕಳು ನೋಂದಾಣಿಯಾಗಿದ್ದು, ಗೈರು ಹಾಜರಾದ ಮಕ್ಕಳಿಗೆ ಫೆ.14 ರಂದು ಮಾತ್ರೆಯನ್ನು ನೀಡಲಾಗುವುದು. ಜಿಲ್ಲೆಯ ಎಲ್ಲಾ ಪೋಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಲಾಗಿದೆ. (ಎನ್.ಬಿ)

Leave a Reply

comments

Related Articles

error: