ಮೈಸೂರು

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಮೈಸೂರು,ಫೆ.9:- ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.

ಮೃತರನ್ನು ನಂಜನಗೂಡು ತಾಲೂಕಿನ ಕರಾಳಪುರದ ರಂಗಶೆಟ್ಟಿ (50) ಎಂದು ಹೇಳಲಾಗಿದೆ. ನಿನ್ನೆ ಸಂಜೆ ನಂಜನಗೂಡಿನ ಕೃಷ್ಣಪ್ಪ ಪೆಟ್ರೋಲ್ ಬಂಕ್ ಬಳಿ ಕೆಎ 09_ ಎಂ ಕ್ಯು 7403 ಟಿವಿಎಸ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದಾಗ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ  ಸಾವನ್ನಪ್ಪಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: