
ಪ್ರಮುಖ ಸುದ್ದಿಮೈಸೂರು
ಫೆ.12ರಂದು ಶ್ರೀ ಸವಿತಾ ಮಹರ್ಷಿ ಜಯಂತಿ
ಮೈಸೂರು, ಫೆ.9 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಸವಿತಾ ಮಹರ್ಷಿ ಜಯಂತೋತ್ಸವ ಸಮಿತಿ ಸಂಯುಕ್ತವಾಗಿ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಕಲಾಮಂದಿರದಲ್ಲಿ ಫೆ.12ರಂದು ಏರ್ಪಡಿಸಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ತಿಳಿಸಿದರು.
ಅಂದು ಬೆಳಗ್ಗೆ 11.30ಕ್ಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸುವರು, ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಇರುವರು. ಸಚಿವ ಸಾ.ರಾ.ಮಹೇಶ್, ಮೇಯರ್ ಪುಷ್ಪಲತಾ ಜಗನ್ನಾಥ್, ಜಿ.ಪಂ.ಅಧ್ಯಕ್ಷ ಸಾ.ರಾ.ನಂದೀಶ್, ಸಂಸದರಾದ ಪ್ರತಾಪ ಸಿಂಹ, ಆರ್.ಧ್ರುವನಾರಾಯಣ್, ಎಲ್.ಶಿವರಾಮೇಗೌಡ ಇನ್ನಿತರರ ಜನಪ್ರತಿನಿಧಿಗಳು ಹಾಜರಿರುವರು. ಶಾಸಕ ಎಲ್. ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30 ರಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಸವಿತಾ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಕೋರಿದರು.
ಸಮಾಜದ ಪದಾಧಿಕಾರಿಗಳಾದ ವಿ.ಮಂಜುನಾಥ್, ವಿ.ರಾಜ್ ಕುಮಾರ್, ಹರೀಶ್, ರಾಜೇಶ್, ಪಿ.ಆರ್.ಮಂಜುನಾಥ್ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)