ಕರ್ನಾಟಕಪ್ರಮುಖ ಸುದ್ದಿ

ಆಪರೇಷನ್ ಕಮಲದಲ್ಲಿ ಮೋದಿ-ಅಮಿತ್ ಶಾ ಭಾಗಿ: ಮಲ್ಲಿಕಾರ್ಜುನ್ ಖರ್ಗೆ ಆರೋಪ

ಕಲಬುರಗಿ (ಫೆ.9): ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಶಾಸಕರನನ್ನು ಖರೀದಿ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯ ನಾಯಕರ ಜೊತೆ ಪ್ರಧಾನಿ ಮೋದಿ, ಅಮಿತ್ ಶಾ ಅವರೂ ಕೂಡ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಬಿಡುಗಡೆ ಮಾಡಿದ ಬಿಎಸ್ ವೈ ಕುರಿತ ಆಡಿಯೋ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೈತ್ರಿ ಸರ್ಕಾರದಲ್ಲಿ ನಮ್ಮ ಕಾಂಗ್ರೆಸ್ ಶಾಸಕರೂ ಕೂಡ ಬದ್ದರಾಗಿದ್ದಾರೆ. ಮೋದಿ-ಅಮಿತ್ ಶಾ ತಿಪ್ಪರಲಾಗ ಹಾಕಿದರೂ ಈ ಸರ್ಕಾರವನ್ನು ಏನು ಮಾಡಲು ಆಗುವುದಿಲ್ಲ ಎಂದು ಹೇಳಿದರು.

ಇನ್ನು ಆಡಿಯೋ ಕುರಿತು ತನಿಖೆ ಆಗಬೇಕು. ಮುಂದೆ ಯಾರೂ ಇಂತಹ ತಪ್ಪು ದಾರಿಗೆ ಇಳಿಯಲು ಧೈರ್ಯ ಮಾಡುವುದಿಲ್ಲ. ಸ್ಪೀಕರ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಜೊತೆಗೆ ಎಸಿಬಿಗೆ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. (ಎನ್.ಬಿ)

Leave a Reply

comments

Related Articles

error: