ಸುದ್ದಿ ಸಂಕ್ಷಿಪ್ತ

ಫೆ.11ರಂದು ಭಾರತ ರಂಗ ಮಹೋತ್ಸವದ ಉದ್ಘಾಟನೆ

ಮೈಸೂರು,ಫೆ.9 : ರಾಷ್ಟ್ರೀಯ ನಾಟಕ ಶಾಲೆಯಿಂದ ಫೆ.11 ರಿಂದ 17ರವರೆಗೆ ನಡೆಯುವ  20ನೇ ಭಾರತ ರಂಗ ಮಹೋತ್ಸವದ ಉದ್ಘಾಟನಾ ಸಮಾರಂಭವು ಫೆ.11ರಂದು ಸಂಜೆ 6.30ಕ್ಕೆ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಚಿವ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಂಸ್ಕೃತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ನಿರುಪಮಾ ಕೊತ್ರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಇರುವರು. ರಾಷ್ಟ್ರೀಯ ನಾಟಕ ಶಾಲೆ ಪ್ರಭಾರ ನಿರ್ದೇಶಕ ಪ್ರೊ.ಸುರೇಶ್ ಶರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಾಯಣದ ನಿರ್ದೇಶಕಿ ಭಾಗೀರಥಿಬಾಯಿ, ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: