ಮೈಸೂರು

ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ ಹಿನ್ನೆಲೆ ಸಚಿವ ಸಾ.ರಾ.ಮಹೇಶ್ ಭೇಟಿ ಮಾಡಿ ಚರ್ಚೆ

ಮೈಸೂರು, ಫೆ.11:- ಮೈಸೂರು ಜಿಲ್ಲೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಾರ್ಚ್ 1, 2ರಂದು ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ ಆಯೋಜನೆಗೊಂಡಿರುವ ಹಿನ್ನೆಲೆಯಲ್ಲಿ  ಸಮ್ಮೇಳನ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿ.ಕೆ. ಮಹೇಂದ್ರ ಅವರ ನೇತೃತ್ವದಲ್ಲಿ  ನಿನ್ನೆ  ಬೆಳಿಗ್ಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು.

ಸಮ್ಮೇಳನದ ಅಂಗವಾಗಿ ಸಮ್ಮೇಳನದ ಇತಿಹಾಸದಲ್ಲಿಯೇ ಇದೇ ಪ್ರಥಮ ಪ್ರಯತ್ನವಾಗಿ ನಿರ್ಮಿಸಲಾಗುತ್ತಿರುವ ಮ್ಯೂಸಿಯಂ ಉದ್ಘಾಟನೆಗೆ ಸಚಿವರನ್ನು ಇದೇ ವೇಳೆ ಆಹ್ವಾನಿಸಲಾಯಿತು. ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಲ್ಲದೆ, ಯಶಸ್ಸಿಗೂ ಶ್ರಮಿಸುವುದಾಗಿ ಸಚಿವ ಸಾ.ರಾ. ಮಹೇಶ್ ಭರವಸೆ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: