ಕರ್ನಾಟಕಪ್ರಮುಖ ಸುದ್ದಿ

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟಟದ ಶಿಕ್ಷಣ ನೀಡಬೇಕು: ಸಚಿವ ಎಚ್.ಡಿ.ರೇವಣ್ಣ

ಹಾಸನ (ಫೆ.11): ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಕಲಿಕೆ ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ ರಾಜ್ಯದಲ್ಲಿ 1000 ಸರ್ಕಾರಿ ಆಂಗ್ಲಮಾಧ್ಯಮ ಶಾಲೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್ .ಡಿ.ರೇವಣ್ಣ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ ,ಹೊಳೆ ನರಸೀಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜು, ಸರ್ಕಾರಿ ಕಾನೂನು ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಶನಿವಾರ (ಫೆ.9) ಪಾಲ್ಗೊಂಡು ಅವರು ಮಾತನಾಡಿದರು .

ಮೊಸಳೆಹೊಸಳ್ಳಿಯಲ್ಲಿ 50ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣವಾಗಲಿದೆ .ಜಿಲ್ಲೆಗೆ ತಾಂತ್ರಿಕ ವಿಶ್ವವಿದ್ಯಾಲಯ ಮಂಜೂರಾಗಿದೆ. ಮಂದೆ ಇನ್ನೂ ಹತ್ತಾರು ಹೊಸ ಯೋಜನೆಗಳು ಜಾರಿಯಾಗಲಿವೆ. ರಾಜ್ಯಾದ್ಯಂತ 3800 ಉಪನ್ಯಾಸ ಕರ ನೇಮಕಾತಿ ನಡೆಯಲಿದೆ ಎಂದು ಸಚಿವ ರೇವಣ್ಣ ಹೇಳಿದರು.

ಹೊಳೆನರಸೀಪುರದಲ್ಲಿ ಯಾವುದೇ ಖಾಸಗಿ ಕಾಲೇಜುಗಳಿಗೂ ಕಡಿಮೆ ಇಲ್ಲದಂತೆ ಸರ್ಕಾರಿ ಕಾಲೇಜುಗಳು ಫಲಿತಾಂಶ ಪಡೆಯುತ್ತಿವೆ . ಬರುವ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶ ಕಲ್ಪಿಸಲಾಗುತ್ತಿದೆ .800 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕೂಡ ಕಲ್ಪಿಸಲಾಗುತ್ತಿದೆ ಎಂದು ಸಚಿವ ರೇವಣ್ಣ ತಿಳಿಸಿದರು
ಉನ್ನತ ಶಿಕ್ಷಣ ಸಚಿವರಾದ ಜಿ.ಟಿ ದೇವೇಗೌಡ ಅವರು ಎಲ್ಲಾ ಕಾಲೇಜುಗಳಲ್ಲಿ ಯೋಗ ವನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುವುದು , ಹಾಗೂ ಎಲ್ಲಾ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಬದಲಾವಣೆ ಅಗತ್ಯ ವಿದೆ ಮುಂದಿನ ದಿನಗಳಲ್ಲಿ ಹಲವು ಹೊಸ ಯೋಜನೆಗಳು ಜಾರಿಗೊಳ್ಳಲಿವೆ ಎಂದು ಅವರು ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮಾತನಾಡಿ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಮಂಡಿಸಿದ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶ ಕಳೆದ 70ವರ್ಷಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡಿದೆ ಅದಕ್ಕೆ ಅನೇಕರು ಕಾರಣರಿದ್ದು ಎಲ್ಲರನ್ನೂ ಸ್ಮರಿಸಬೇಕು ಎಂದು ಅವರು ತಿಳಿಸಿದರು.

ಹೊಳೆನರಸೀಪುರ ಕ್ಷೇತ್ರದಲ್ಲಿನ ಶೈಕ್ಷಣಿಕ ಮತ್ತು ಇತರ ಪ್ರಗತಿಗೆ ಹೆಚ್.ಡಿ ರೇವಣ್ಣ ಅವರೇ ಪ್ರಮುಖರಾಗಿದ್ದಾರೆ ಹೆಚ್ವು ಶಿಕ್ಷಣ ಕಲಿಯದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ವಿದ್ಯಾಕ್ಷೇತ್ರಕ್ಕೆ ನೀಡುತ್ತಿರುವ ಆದ್ಯತೆ ಮಾಡಿರುವ ಸಾಧನೆ ಅಭಿನಂದನಾರ್ಹ ಎಂದು ದೇವೇಗೌಡರು ಹೇಳಿದರು
ಶಾಸಕರಾದ ಎ.ಟಿ ರಾಮಸ್ವಾಮಿ,ಹೆಚ್.ಕೆ ಕುಮಾರ ಸ್ವಾಮಿ,ಸಿ.ಎನ್ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀಕಂಠೇಗೌಡ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾದ ಮಂಜುಳ ಅವರು ಮಾತನಾಡಿ ಹೊಳೆನರಸೀಪುರ ತಾಲ್ಲೂಕಿನ ಲ್ಲಿ ಇರುವ ಶಿಕ್ಷಣ ಸಂಸ್ಥೆಗಳು, ಅಲ್ಲಿ ದೊರೆಯುತ್ತಿರುವ ಶಿಕ್ಷಣಗಳ ಬಗ್ಗೆ ಶ್ಲಾಘಿಸಿದರು.

ಮೂರೂ ಕಾಲೇಜುಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರೂ ಹಾಗೂ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರಾದ ಭವಾನಿ ರೇವಣ್ಣ ಅವರು ಮಾತನಾಡಿ ಹೊಳೆನರಸೀಪುರ ದಲ್ಲಿರುವ ಕಾಲೇಜುಗಳು ಅದರ ಗುಣಮಟ್ಟ ನ್ಯಾಕ್ ಶ್ರೇಣಿ,ಸ್ನಾತಕೋತ್ತರ ಅಧ್ಯಯನ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಶಾಸಕರಾದ ಲಿಂಗೇಶ್,ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಾದ. ಸುಪ್ರದೀಪ್ ಯಜಮಾನ್ , ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಜಯಲಕ್ಷ್ಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ,ಎ.ಎಸ್.ಪಿ. ನಂದಿನಿ ,ತಹಶೀಲ್ದಾರ್ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: